top of page

ಹಾಲಿನ ದರ ಐದು ರೂ. ಹೆಚ್ಚಳಕ್ಕೆ ಹೆಚ್ಚಿದ ಒತ್ತಡ: ಸಚಿವ ವೆಂಕಟೇಶ್

  • Writer: vishwa patha
    vishwa patha
  • Jul 13, 2023
  • 1 min read

ಬೆಂಗಳೂರು: ಇತ್ತೀಚೆಗಷ್ಟೇ ಚರ್ಚೆಗೆ ಕಾರಣವಾಗಿದ್ದ ಹಾಲಿನ ದರ ಏರಿಕೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ದರ ಏರಿಕೆಗೆ ರೈತರು ಹಾಗೂ ಹಾಲು ಒಕ್ಕೂಟಗಳಿಂದ ಒತ್ತಡ ಹೆಚ್ಚಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಟಿವಿ9ಗೆ ಮಾಹಿತಿ ನೀಡಿದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ವಿಜ್ಞಾನ ಸಚಿವ ಕೆ ವೆಂಕಟೇಶ್ ಪ್ರಮುಖವಾಗಿ ರೈತರಿಗೆ ಅನುಕೂಲವಾಗಬೇಕು. ಆದ್ದರಿಂದ ಹಾಲಿನ ದರ ಏರಿಕೆ ಮಾಡುತ್ತೇವೆ ಎಂದರು.



ಹಾಲಿನ ದರದ ಏರಿಕೆ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಶೀಘ್ರದಲ್ಲೇ ಹಾಲಿನ ದರ ಏರಿಕೆ ಮಾಡುತ್ತೇವೆ. ಪ್ರಮುಖವಾಗಿ ರೈತರಿಗೆ ಅನುಕೂಲವಾಗಬೇಕು. ಆದ್ದರಿಂದ ಹಾಲಿನ ದರ ಏರಿಕೆ ಮಾಡುತ್ತೇವೆ. 5 ರೂ. ಏರಿಕೆ ಮಾಡಿದರೆ ಒಳ್ಳೆಯದು ಅಂತ ಹೇಳುತ್ತಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದರು. ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್‌ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿತ್ತು. ಇದೀಗ ಗ್ರಾಹಕರಿಗೆ ಹಾಲಿದ ದರ ಏರಿಕೆಯ ಬಿಸಿ ತಟ್ಟಲಿದೆ. ನಷ್ಟದ ಕಾರಣ ಹಾಲು ಒಕ್ಕೂಟಗಳು ಎರಡು ತಿಂಗಳಿಂದ ರೈತರಿಗೆ ನೀಡುತ್ತಿದ್ದ ಸಹಾಯಧನವನ್ನು ಕಡಿತಗೊಳಿಸಲು ಮುಂದಾಗಿದ್ದವು. ಆದರೆ ಪ್ರೋತ್ಸಾಹ ಧನ ಕಡಿಮೆ ಮಾಡದಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಇದೇ ಕಾರಣಕ್ಕೆ ಹಾಲಿನ ದರವನ್ನು ಐದು ರೂಪಾಯಿ ಏರಿಕೆಯ ಪ್ರಸ್ತಾವನೆವನ್ನು ಒಕ್ಕೂಟಗಳು ಸರ್ಕಾರದ ಮುಂದಿಟ್ಟಿವೆ.

Comments


bottom of page